Kannada NewsKarnataka NewsNationalPolitics
*ಸುದ್ದಿಗೋಷ್ಠಿಯಲ್ಲೇ ಕುಸಿದು ಬಿದ್ದ ಕಾಂಗ್ರೆಸ್ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ನಿಧನ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ, ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಹಠಾತ್ ಹೃದಯಾಘಾತದಿಂದ ಕುಸಿದ್ದು ಬಿದ್ದು ನಿಧನ ಹೊಂದಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಆದೇಶ ನೀಡಿರುವುದನ್ನು ವಿರೋಧಿಸಿ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಮಾಡುತ್ತಿದ್ದ ವೇಳೆ ಸಿ.ಕೆ.ರವಿಚಂದ್ರನ್ ಹಠಾತ್ ಕುಸಿದು ಬಿದ್ದ ಅವರನ್ನು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ