Latest

ಕಾಂಗ್ರೆಸ್ ಕಾರ್ಯಕರ್ತನಿಗೆ ಚೂರಿ ಇರಿತ

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನಿಗೆ ಚೂರಿಯಿಂದ ಇರಿಯಲಾಗಿದೆ.

ಮಧು (24) ಚೂರಿ ಇರಿತಕ್ಕೊಳಗಾದ ಕಾಂಗ್ರೆಸ್ ಕಾರ್ಯಕರ್ತ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಅವರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೊನ್ನಾಳಿ ಕ್ಷೇತ್ರದಿಂದ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸುವಾಗ ಗ್ರಾಮದಲ್ಲಿ‌ ಪಟಾಕಿ ಹಚ್ಚಿದ್ದಕ್ಕೆ ಆರಂಭಗೊಂಡ ಜಗಳದಲ್ಲಿ ಮಧುಗೆ ಚೂರಿಯಿಂದ ಇರಿಯಲಾಗಿದೆ ಎನ್ನಲಾಗಿದೆ.

ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರ ಬೆಂಬಲಿಗರಾದ ಪ್ರವೀಣ್ ಪ್ರಕಾಶ್ ತೀರ್ಥಲಿಂಗ ಹಾಗೂ ಬಿಜೆಪಿಯ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದ್ದು ನ್ಯಾಮತಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

https://pragati.taskdun.com/mangaloregoods-trainaccident15-buffalos-death/
https://pragati.taskdun.com/m-p-kumaraswamyc-t-ravielection-result/
https://pragati.taskdun.com/karnatakaheavy-rainimd-5/

Related Articles

Back to top button