Election NewsKannada NewsKarnataka NewsPolitics

ಕುಮಾರಸ್ವಾಮಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಸಭೆ ನಡೆಸಿದ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಚ್‌ಡಿ ಕುಮಾರಸ್ವಾಮಿ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ  ನಡೆಸಲಾಗಿತ್ತು. ಈ ವೇಳೆ ಹೋಟೆಲ್ ಮುಂದೆ ಜಾಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕುಮಾರಸ್ವಾಮಿ ಹೊರ ಬರುತಿದ್ದಂತೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. 

Related Articles
Home add -Advt

ನೋಡ ನೋಡುತ್ತಿದ್ದಂತೆ ಕಾರ್ಯಕರ್ತರು ಜಮಾಯಿಸಿದರು. ಗಲಾಟೆ ಸಾಧ್ಯತೆ ಕಂಡು ಅಲ್ಲಿಯೇ ಇದ್ದ ಪೊಲೀಸರು ಗುಂಪು ಚದುರಿಸಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ

Related Articles

Back to top button