‘ಜನತಾ ದಳ’ ಎಂಬ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂಡರೆ ಒಳಿತು; ಕಾಂಗ್ರೆಸ್ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿ, ಜೆಡಿಎಸ್ ನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು. ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ? ಎಂದು ಪ್ರಶ್ನಿಸಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಹೇಗಿದೆಯೆಂದರೆ ನಡು ನೀರಿನಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನ್ನೊನ್ನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು. ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ? ಎಂದು ಟಾಂಗ್ ನೀಡಿದೆ.
ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದರು. ಆದರೆ ಈಗ ಜಾತ್ಯಾತೀತತೆಯನ್ನೇ ವಿಸರ್ಜಿಸಲು ಹೊರಟಿದ್ದಾರೆ. ‘ಜನತಾ ದಳ’ ಎಂಬ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂದರೆ ಒಳಿತು ಎಂದು ಜೆಡಿಎಸ್ ಗೆ ಟೀಕಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ