Latest

ಕುಟುಂಬ ರಾಜಕಾರಣಕ್ಕೆ ಬ್ರೇಕ್; 70 ವರ್ಷ ಮೇಲ್ಪಟ್ಟವರಿಗೂ ಕೋಕ್; ಮಹತ್ವದ ನಿರ್ಧಾರಕ್ಕೆ ಮುಂದಾದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಕಾಂಗ್ರೆಸ್ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಬಗ್ಗೆ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತಾನಾ ಶಿಬಿರದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡವ ಬಗ್ಗೆ ಚಿಂತನೆ ನಡೆಸಲಾಗಿದೆ. ಅಲ್ಲದೇ 70 ವರ್ಷ ಮೇಲ್ಪಟ್ಟವರಿಗೆ ಚುನಾವಣೆಗೆ ಟಿಕೆಟ್ ನಿರಾಕರಿಸಲು ಗಂಭೀರ ಚಿಂತನೆಗಳು ನಡೆದಿವೆ.

70 ವರ್ಷ ಮೇಲ್ಪಟ್ಟವರಿಗೆ ಕೋಕ್ ನೀಡುವ ಮೂಲಕ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. 70 ವರ್ಷ ಮೇಲ್ಪಟ್ಟವರು ಪಕ್ಷದ ಸಲಹಾ ಸಮಿತಿಯಲ್ಲಿ ಕೆಲಸ ಮಾಡಲಿ ಎಂದು ಸಂಘಟನಾ ಸಮಿತಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದೆ ಎಂದು ತಿಳಿದುಬಂದಿದೆ.

ಎರಡು ಬಾರಿ ಆಯ್ಕೆಯಾದವರಿಗೆ ಮತ್ತೆ ಅವಕಾಶ ನೀಡುವಂತಿಲ್ಲ. ಶೇ.50ರಷ್ಟು ಯುವಕರಿಗೆ ಆದ್ಯತೆ ನೀಡಬೇಕು. ಇನ್ನು ಕರ್ನಾಟಕದಿಂದ ಯುವಕರಿಗೆ ರಾಜ್ಯಸಭೆಗೆ ಅವಕಾಶ ನೀಡುವಂತೆಯೂ ಒತ್ತಾಯಗಳು ಕೇಳಿಬಂದಿದೆ ಎನ್ನಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳು ಆಗುತ್ತೆ; ‘ಆಪರೇಷನ್ ಕಮಲ’ ಪ್ಲಾನ್ ಸ್ಪಷ್ಟಪಡಿಸಿದ ಸಿಎಂ

Home add -Advt

Related Articles

Back to top button