
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ದಿನಾಂಕ ನಿಗದಿಯಾಗಿದೆ.
ಮಾರ್ಚ್ 4ರಂದು ಸಂಜೆ 6 ಗಂಟೆಗೆ ಬೆಂಗಳೂರು ಅರಮನೆ ರಸ್ತೆಯ ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸಭಾನಾಯಕ ಎನ್.ಎಸ್.ಭೋಸರಾಜು, ಕಾರ್ಯಾಧ್ಯಕ್ಷರು ಉಪಸ್ಥಿತರಿರಲಿದ್ದಾರೆ.
ಸದನದಲ್ಲಿ ಚರ್ಚಿಸಬಹುದಾದ ವಿಷಾಗಳಿಗೆ ಸಂಬಂಧಿಸಿದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ