
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ ಆರಂಭವಾಗಿದ್ದು, ಜನವರಿ 31ರವರೆಗೂ ನಡೆಯಲಿದೆ. ಅಧಿವೇಶನದ ಮೊದಲ ದಿನ ಜಂಟಿ ಸದನ ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಭಾಷಣ ಓದದೇ ತೆರಳಿರುವುದು ರಾಜ್ಯಾದ್ಯಂತ ಮಾತ್ರವಲ್ಲ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.
ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರು ಕೇವಲ ಮೂರು ಸಾಲಿನ ಭಾಷಣ ಮಾಡಿ ತೆರಳಿದ್ದಾರೆ. ರಾಜ್ಯಪಾಲರ ಭಾಷಣ ಹಾಗೂ ವಿಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಜನವರಿ 28ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.




