Latest

ಕಾಂಗ್ರೆಸ್ ನಲ್ಲೂ ಆರಂಭವಾಯ್ತೆ ನಾಯಕತ್ವ ಕಲಹ?; ದೆಹಲಿಗೆ ದೌಡಾಯಿಸಿದ ಡಿಕೆಶಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಆರಂಭವಾದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಲ್ಲಿಯೂ ನಾಯಕತ್ವಕ್ಕಾಗಿ ಕಲಹ ಆರಂಭವಾಯಿತೇ?, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

’ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ’ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದರು. ಇದಕ್ಕೆ ಪಕ್ಷದಲ್ಲಿ ಕೆಲವರು ಪ್ರತಿಕ್ರಿಯಿಸುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಬೇಕೇ ಹೊರತು ಮುಖ್ಯಮಂತ್ರಿಯಾಗುವುದೇ ನಮ್ಮ ಉದ್ದೇಶವಾಗಬಾರದು ಎಂದಿದ್ದರು.

Home add -Advt

ಯಾರು ಸಿಎಂ ಆಗುತ್ತಾರೆ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪರೋಕ್ಷವಾಗಿ ಶಾಸಕರಿಗೆ ಎಚ್ಚರಿಕೆ ನೀಡಿದ್ದರು. ಆದಾಗ್ಯೂ ನಾಯಕತ್ವ ವಿಚಾರವಾಗಿ ಕೈ ಪಾಳಯದಲ್ಲಿ ಚರ್ಚೆ ಮುಂದುವರೆದಿದೆ.

ಈ ಎಲ್ಲಾ ಬೆಳವಣಿಗಳ ನಡುವೆ ಇದೀಗ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಷಯ ಕೋರುವ ನೆಪದಲ್ಲಿ ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ಒಳಜಗಳದ ಬಗ್ಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.

ಅಲ್ಲದೇ ನಾಯಕತ್ವದ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ಹಾಗೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗಳನ್ನು ಎದುರಿಸುವ ಬಗ್ಗೆ ಹೈಕಮಾಂಡ್ ಸೂಚಿಸುವಂತೆಯೂ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ

Related Articles

Back to top button