ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ವಸಂತನಗರ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದ ಶಾಂಘರಿಲಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಮುಂದಿನ 25 ವರ್ಷಗಳ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಇದು ಕಾಂಗ್ರೆಸ್ ಬದ್ಧತೆ ಎಂಬ ಘೋಷವಾಕ್ಯದಡಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಈ ವೇಳೆ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪ್ರಣಾಳಿಕೆಯ ಅಂಶಗಳು:
ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್
ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು- ಪದವೀಧರರಿಗೆ 3,000 ರೂಪಾಯಿ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ
ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2000 ರೂ. ಸಹಾಯಧನ
ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಪ್ರತಿ ವ್ಯಕ್ತಿಗೆ 10ಕೆಜಿ ಅಕ್ಕಿ
ಖಾಲಿಯಿರುವ ಎಲ್ಲಾ ಸರ್ಕಾರಿ ಹುದೆಗಳು 1 ವರ್ಷದಲ್ಲಿ ಭರ್ತಿ
ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ನೌಕರರ ಖಾಯಂ
ಅಂಗನವಾಡಿ ಕಾರ್ಯಕರ್ತರ ವೇತನ 11,500ರಿಂದ 15,000ಕ್ಕೆ ಹೆಚ್ಚಳ
ಆಶಾಕಾರ್ಯಕರ್ತೆಯರ ಗೌರವಧನ 8 ಸಾವಿರ ರೂಗೆ ಹೆಚ್ಚಳ
ಬಿಸಿಯೂಟ ನೌಕರರ ವೇತನ 6000ಕ್ಕೆ ಹೆಚ್ಚಳ
ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ 5000 ವಿಶೇಷ ಭತ್ಯೆ
ಎಲ್ಲಾ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ವೇತನ ಹೆಚ್ಚುವರಿ ಪಾವತಿ
ಪ್ರತಿ ಜಿಲ್ಲೆಯಲ್ಲಿ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆ ನಿರ್ಮಾಣ
ಬಜರಂಗದಳ, ಪಿಎಫ್ ಐ ನಿಷೇಧ
ಕರ್ನಾಟಕ ಮಾಹಿತಿದಾರರ ಕಾಯ್ದೆ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ