ಕೆಪಿಸಿಸಿಯಲ್ಲಿ 4 ಕಾರ್ಯಾಧ್ಯಕ್ಷ ಸ್ಥಾನ ಅಗತ್ಯವಿಲ್ಲ ಎಂದ ಹೆಚ್ ಕೆ ಪಾಟೀಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿಯಲ್ಲಿ 4 ಕಾರ್ಯಾಧ್ಯಕ್ಷ ಸ್ಥಾನದ ಅಗತ್ಯವಿಲ್ಲ. ಈಗ ಇರೋ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾ‌ನ ಮುಂದುವರೆಸಿದರೆ ಸಾಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್ ಕೆ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಕೆ ಪಾಟೀಲ್, ಕೆಪಿಸಿಸಿಯಲ್ಲಿ 4 ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಹೈಕಮಾಂಡ್​​ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿದರು. ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆ ಇಲ್ಲ. ಯಾಕೆ ನಾಲ್ಕು ಕಾರ್ಯಾಧ್ಯಕ್ಷ ಬೇಕು ಅಂತಿದ್ದಾರೋ ಗೊತ್ತಿಲ್ಲ. ಈಗ ಇರೋ ಒಂದು ಕಾರ್ಯಾಧ್ಯಕ್ಷ ಸ್ಥಾನ ಮುಂದುವರೆದರೆ ಸಾಕು ಎಂದರು.

ಅಧ್ಯಕ್ಷ ಸ್ಥಾನದ ಆಯ್ಕೆ ಈಗಾಗಲೇ ವಿಳಂಬ ಆಗಿದೆ. ಕೂಡಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಾಗಬೇಕು. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರ ಆಯ್ಕೆ ಮುಖ್ಯವಾಗಿದೆ. ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯ್ತಿ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ಕೂಡಲೇ ಹೈಕಮಾಂಡ್ ಅಧ್ಯಕ್ಷರ ನೇಮಕ ಮಾಡಲಿ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕ ಸ್ಥಾನ ಪ್ರತ್ಯೇಕದ ಬಗ್ಗೆಯೂ ಮಾತನಾಡಿದ ಹೆಚ್ ಕೆ ಪಾಟೀಲ್, ಮಹಾರಾಷ್ಟ್ರ ಕಾಂಗ್ರೆಸ್ ಮತ್ತು ಯುಪಿಎ ಮಾದರಿಯಲ್ಲೇ ರಾಜ್ಯದಲ್ಲೂ ಸ್ಥಾನ ಹಂಚಿಕೆ ಆಗಲಿ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿರುವುದರಿಂದ ದೇಶಕ್ಕೆ ಒಂದೇ ಮಾದರಿಯಲ್ಲಿ ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಾಕನ ಸ್ಥಾನವಿರಬೇಕು. ಹಾಗಾಗಿ ರಾಜ್ಯದಲ್ಲೂ ವಿರೋಧ ಪಕ್ಷದ ನಾಯಕ ಮತ್ತು ಸಿಎಲ್​ಪಿ ಸ್ಥಾನ ಪ್ರತ್ಯೇಕವಾಗಲಿ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button