*ಸಿಡಿ ಫ್ಯಾಕ್ಟರಿ ಎಂದ ಜೆಡಿಎಸ್ ಗೆ ಬ್ಲೂ ಬಾಯ್ಸ್ ಪಾರ್ಟಿ ಎಂದು ತಿರುಗೇಟು ನೀಡಿದ ಕಾಂಗ್ರೆಸ್*

ಕಾಂಗ್ರೆಸ್-ಜೆಡಿಎಸ್ ನಡುವೆ ಟ್ವೀಟ್ ವಾರ್
ಪ್ರಗತಿವಾಹಿನಿ ಸುದ್ದಿ: ಸಿಡಿ ಫ್ಯಾಕ್ಟರಿ ಮಾಲೀಕನ “ಮನೆಹಾಳು ಆತ್ಮರತಿ” ಬಗ್ಗೆ ರಾಜ್ಯ ಕಾಂಗ್ರೆಸ್ ಮರೆತಿದೆ. ಟೆಂಟ್’ನಲ್ಲಿ ನೀಲಿ ಸಿನಿಮಾ ತೋರಿಸಿದ “ದಂಧೆಕೋರನ ಆತ್ಮರತಿ” ಎಂತಹದ್ದು? ಕಲೆಕ್ಷನ್ ಗಿರಾಕಿಯ ಆತ್ಮರತಿ” ಇರುವುದು ಮಸಾಜ್ ಪಾರ್ಲರ್’ಗಳಲ್ಲಿ ಅಲ್ಲವೇ ? “ಹನಿಟ್ರಾಪ್ ಅಧ್ಯಕ್ಷನ ಆತ್ಮರತಿ”ಗೆ ಸಂಪುಟದ ಮಂತ್ರಿಗಳು, ಶಾಸಕರೇ ಬಲಿಪಶುಗಳಲ್ಲವೇ ? ಎಂದೆಲ್ಲ ಟ್ವೀಟ್ ಮೂಲಕ ವಾಅಗ್ದಾಳಿ ನಡೆಸಿದ್ದ ಜೆಡಿಎಸ್ ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕವೇ ತಿರುಗೇಟು ನೀಡಿದೆ.
ಅಕಟಕಟಾ.. ನಿಮ್ಮದು ಸೆಕ್ಯೂರ್ಡ್ “ಬ್ಲೂ ಬಾಯ್ಸ್” ಪಾರ್ಟಿ ಅನ್ನೋದು ಮರೆತು ಹೋಯ್ತೆ..?! ಅದೂ ಇಷ್ಟು ಬೇಗ..? ಶಾಂತಂ ಪಾಪಂ..!! ನಿಮ್ಮಲ್ಲಿ ಬ್ಲೂ ಫಿಲಂ ನಿರ್ಮಾಪಕರು, ನಿರ್ದೇಶಕರು, ಎಲ್ಲಕ್ಕಿಂತ ಮಿಗಿಲಾಗಿ ಪಾತ್ರಧಾರಿಗಳು ತುಂಬಿ ತುಳುಕುತಿದ್ದಾರೆ. ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ‘ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್! ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾಲಿವುಡ್ ವರೆಗೂ ಹಾರಾಡಿಸಿದೆ. ಅವರು ಈಗಲೂ ಜೈಲಲ್ಲಿ “ನೀಲ ಮೇಘ ಶ್ಯಾಮ..” ಹಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ನಿಮ್ಮ ಇನ್ನೊಬ್ಬ ಲಿಂಬಿಯ ಬನದ ನಾಯಕರು “ಲಿಂಬೆ ಹಣ್ಣಿನಂತ…” ಹಾಡು ಹೇಳಲು ಹೋಗಿ ಜೈಲಲ್ಲಿ ಮುದ್ದೆ ಮುರಿದು ಬಂದಿದ್ದಾರೆ. ಇನ್ನೊಬ್ಬ “ರಾಧಾ ಮಾಧವ ಮನೋ ವಿಲಾಸ..” ನಾಯಕರು ಜಸ್ಟ್ ಎಸ್ಕೇಪ್ ಆಗಿದ್ದಾರೆ.
ನಿಮ್ಮ ನಾಯಕರೇ ನಿರ್ಮಿಸಿ, ನಿರ್ದೇಶಿಸಿ, ನಟಿಸಿ ಸಿನಿಮಾ ತೆಗೆದು ಜಗತ್ತಿಗೆ ತೋರಿಸಿರುವಾಗ ಬೇರೆಯವರಿಗೆ ಟೆಂಟಲ್ಲಿ ತೋರಿಸುವ ಅವಕಾಶವೆಲ್ಲಿದೇ?!
ನಿಜಕ್ಕೂ ನಿಮ್ಮ ಸಿನಿಮಾ ಚನ್ನಾಗಿದೆ. ಅದರ ಮೇಲೆ ಮತ್ತೊಂದು ಕತೆ ಕಟ್ಟಲು ಹೋಗಬೇಡಿ. ಸುಮ್ಮನೇ ಆಕಾಶಕ್ಕೆ ಉಗುಳಿ ಮುಖಕ್ಕೆ ಸಿಂಪಡಿಸಿಕೊಳ್ಳಬೇಡಿ ಎಂದು ತಿರುಗೇಟು ನೀಡಿದೆ.



