ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಕೂಗಿನ ಬಳಿಕ ಇದೀಗ ಮಹಿಳಾ ಸಿಎಂ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ನಲ್ಲಿ ಮಹಿಳಾ ಸಿಎಂ ಬೇಡಿಕೆ ಇಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂಬುದು ನಮ್ಮೆಲ್ಲರ ಆಶಯ. ಕಾಂಗ್ರೆಸ್ ನಲ್ಲಿ ಮಹಿಳಾ ಮುಖ್ಯಮಂತ್ರಿಯಾಗಬೇಕು. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಮಹಿಳೆಗೆ ಸಿಎಂ ಸ್ಥಾನ ಕೊಡಬಾರದು? ಅದಕ್ಕೆ ತಕ್ಕ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಕೂಗೂ ಕೂಡ ಇದೆ. ನಾವು ಮಹಿಳಾ ಸಿಎಂ ಬಗ್ಗೆ ಬೇಡಿಕೆ ಇಡುತ್ತೇವೆ. ಕಾಂಗ್ರೆಸ್ ನಿಂದ ಮಾತ್ರ ಎಲ್ಲವೂ ಸಾಧ್ಯ. ಬಿಜೆಪಿ ದಲಿತರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಯೋಗ್ಯತೆ ಆ ಪಕ್ಷಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಪ್ರಾತಿನಿದ್ಯಕೊಡಬೇಕು. ಇದನ್ನು ಈಗಾಗಲೇ ನಮ್ಮ ನಾಯಕರ ಗಮನಕ್ಕೆ ತಂದಿದ್ದೇವೆ. ಮಹಿಳೆಯರಿಗೆ ಟಿಕೆಟ್ ಕೊಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಜನವರಿ 8ರಂದು ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ ನಡೆಯಲಿದೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನಾಯಕತ್ವದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.
*ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬಸವರಾಜ ಬೊಮ್ಮಾಯಿ*
https://pragati.taskdun.com/mahadai-issuecm-basavaraj-bommaireaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ