Latest

ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರದ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಮುಖ್ಯಮಂತ್ರಿ ಚಂದ್ರು, ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸಧ್ಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿದ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಎಂಎಲ್ ಸಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಅವರನ್ನು ಪರಿಗಣಿಸದಿರುವುದು, ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ಗಮನಿಸದಿರುವ ಕಾರಣ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮ ಕಾರ್ಯಾಗಾರ

Home add -Advt

Related Articles

Back to top button