ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಾವಣಗೆರೆ ಹಾಗೂ ರಾಮನಗರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಾಗೂ ಸಮಾವೇಶವನ್ನು ಧಿಢೀರ್ ರದ್ದುಗೊಳಿಸಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ದಾವಣಗೆರೆ ಹಾಗೂ ರಾಮನಗರದಲ್ಲಿ ಇಂದು ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆ, ಸಮಾವೇಶಗಳನ್ನು ರದ್ದುಗೊಂಡಿದೆ.
ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯನ್ನು ಕೂಡ ರದ್ದು ಮಾಡಲಾಗಿದೆ.
ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ರವರು ಸೇರಿದಂತೆ ಪಕ್ಷದ ಇತರೆ ನಾಯಕರುಗಳು ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ