
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದು ಹಿಂದಿರುವ ಬಿಜೆಪಿ ಪಿತೂರಿ ಖಂಡಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಬೋಸರಾಜ್, ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ