*ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ರಣಕಹಳೆ; ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
ಪ್ರತಿಭಟನೆಗೆ ಅವಕಾಶ ವಿಸ್ತರಣೆ
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿರುವ ಅನುದಾನ ತಾರತಮ್ಯ, ಅನುದಾನ ಬಿಡುಗಡೆಯಲ್ಲಿ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯದ ಇಡೀ ಕಾಂಗ್ರೆಸ್ ಸರ್ಕಾರವೇ ಬೀಡು ಬಿಟ್ಟಿದೆ. ಇದೇ ಮೊದಲ ಬಾರಿಗೆ ಒಂದು ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಗೆ ತೆರಳಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್,ಸಚಿವರು, ಶಾಸಕರು, ರಾಜ್ಯಸಭಾ ಸದಸ್ಯರು,ಕಾರ್ಯಕರ್ತರು, ಯೂಥ್ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಗೆ ದೆಹಲಿ ಪೊಲೀಸ್ ಮೂರು ಗಂಟೆಗಳ ಕಾಲ ಅವಕಾಶ ನೀಡಿದೆ. ನಿನ್ನೆ ಅರ್ಧಗಂಟೆ ಮಾತ್ರ ಪ್ರತಿಭಟನೆಗೆ ಅವಕಾಶ ಎಂದಿದ್ದ ದೆಹಲಿ ಪೊಲೀಸ್, ಇಂದು ಕಾಲಾವಕಾಶ ವಿಸ್ತರಿಸಿದೆ. ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ