Kannada NewsKarnataka NewsLatestPolitics

*ಕಾಂಗ್ರೆಸ್ ಪ್ರತಿಭಟನೆಗೆ ಕೇವಲ ಅರ್ಧ ಗಂಟೆ ಮಾತ್ರ ಅವಕಾಶ….!*

ಪ್ರಗತಿವಾಹಿನಿ ಸುದ್ದಿ: ಅನುದಾನದ ಹಣ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

Home add -Advt

ದೆಹಲಿಯ ಜಂತರ್ ಮಂತರ್ ನಲ್ಲಿ ನಾಳೆ ಬೆಳಿಗ್ಗೆ 11ಗಂಟೆಯಿಂದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಯುವ ಕಾಂಗ್ರೆಸ್ ಮುಖಂಡರು ದೆಹಲಿಗೆ ತೆರಳಿದ್ದು ಕೇಂದ್ರ ಸರ್ಕಾರದ ವಿರುದ್ಧ ಧರಣಿಗೆ ಸಿದ್ಧತೆ ನಡೆಸಿದ್ದಾರೆ.

ಆದರೆ ದೆಹಲಿ ಪೊಲೀಸರು ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಕೇವಲ ಅರ್ಧ ಗಂಟೆ ಮಾತ್ರ ಅವಕಾಶ ನೀಡಿದ್ದಾರೆ. ನಾಳೆ ಮಧ್ಯಾಹ್ನ 12:30ರಿಂದ 1 ಗಂಟೆವರೆಗೆ ಮಾತ್ರ ಪ್ರತಿಭಟನೆಗೆ ದೆಹಲಿ ಪೊಲೀಸ್ ಅವಕಾಶ ಕೊಟ್ಟಿದೆ ಎಂದು ತಿಳಿದುಬಂದಿದೆ.


Related Articles

Back to top button