ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸರ್ಕಾರವನ್ನು ಕೆಳಗಿಳಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕರ್ನಾಟಕದಲ್ಲಿ ಚುನಾವಣೆಯನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಡಿಮೆ ಅಂತರದಲ್ಲಿ ಗೆಲ್ಲುವ ಗುರಿ ಯಾವತ್ತು ಹೊಂದಿರಬಾರದು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲೆಬೇಕು. 20 ವರ್ಷಗಳ ಹಿಂದೆ ಮಾಡಿದ್ದು ಈಗ ನಡೆಯುವುದಿಲ್ಲ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಸಾಧಿಸಲು ಸಾಧ್ಯ ಎಂದು ಕರೆ ನೀಡಿದರು.
ಕರ್ನಾಟಕದಲ್ಲಿ 150 ಸೀಟ್ ಗೆಲ್ಲಲೇಬೇಕು. ಯಾವುದೇ ಕಾರಣಕ್ಕೂ ಒಂದು ನಂಬರ್ ಕೂಡ ಕಡಿಮೆಯಾಗಬಾರದು. ನಾಯಕರಿಗೆ ನಾವು ಇಷ್ಟ ಕಷ್ಟದ ಮೇಲೆ ಮಣೆ ಹಾಕುವುದಿಲ್ಲ. ಯಾರು ಕೆಲಸ ಮಾಡುತ್ತಿದ್ದಾರೆ, ಪಕ್ಷ ನಿಷ್ಠೆ ಇದೆಯೇ? ಯಾವ ರೀತಿ ಕಾರ್ಯೋನ್ಮುಖರಾಗಿದ್ದಾರೆ ಎಂಬುದನ್ನು ಪರಿಗಣಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾರ್ಯಕರ್ತರಿಗೂ ಅಧಿಕಾರ ನೀಡಲಾಗುವುದು. ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದು ಕಷ್ಟವೇನಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸರಿಯಾದ ವಿಚಾರಗಳನ್ನು ಕೈಗೆತ್ತಿಗೊಂಡಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಪ್ರಧಾನಿ ಮೋದಿ ಹತ್ಯೆಗೆ ಸಂಚು; ಭದ್ರತಾ ತಂಡಕ್ಕೆ ಇ-ಮೇಲ್ ರವಾನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ