Kannada NewsKarnataka NewsLatestPolitics

*ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಯಾರು ಯನಿಸಿದ್ದರೋ ಅದೇ ಟೀಂ ಮತ್ತೆ ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಶಸಕರನ್ನು ಖರೀದಿ ಮಾಡಲು ನೇರವಾಗಿ ಅವರ ಮನೆಗೆ ಹೋಗುತ್ತಿರುವ ಟೀಂ, 50 ಕೋಟಿ ಹಣದ ನೀಡುವುದರ ಜೊತೆಗೆ ಮಂತ್ರಿ ಸ್ಥಾನದ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಟಿಂ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪಿಎ ಆಗಿದ್ದ ಸಂತೋಷ್ ಕೂಡ ಇದ್ದಾರೆ. ರೆಸಾರ್ಟ್ ಗಳಲ್ಲಿಯೂ ಹಲವು ಶಸಕರನ್ನು ಭೇಟಿಯಾಗಿದ್ದಾರೆ. ಈ ಕುರಿತು ವಿಡಿಯೋ ಕೂಡ ನನ್ನ ಬಳಿ ಇದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ನಮ್ಮ ನಾಲ್ಕು ಜನ ಶಾಸಕರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ. ಒಟ್ಟಾರೆ ಶಾಸಕರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button