ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 6 ಪ್ರಶ್ನೆಗಳನ್ನು ಕೇಳಿದೆ.
ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬೊಮ್ಮಾಯಿ ಅವರು ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೆನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು? ಕೇವಲ ದೆಹಲಿ ಟೂರು ಎಂದು ವ್ಯಂಗ್ಯವಾಡಿದೆ.
ಸಿಎಂ ಬೊಮ್ಮಾಯಿಯವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಾಗಿದೆ ನಿಮ್ಮ ಸಚಿವರ ಕೆಲಸದ ಬಗ್ಗೆ ತೃಪ್ತಿಯಿದೆಯೇ? ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುತ್ತಿರುವವರು ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲಿದ್ದಾರೆ. ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ? ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.
ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು; ಅರಿವು-ಅಂತ:ಕರಣ ಪಾಠದೊಂದಿಗೆ 6 ತಿಂಗಳ ಸಾಧನೆ ವಿವರಿಸಿದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ