
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಉತ್ತರ ಸಂಚಾರಿ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ ಸಂಜು ಭಂಡಾರಿ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು.
ಖಾನಾಪುರ ತಾಲೂಕಿನ ಹಿರೆಹಟ್ಟಿಹೊಳಿಯವರಾಗಿದ್ದ ಸಂಜು ಭಂಡಾರಿ ಕೆಲಸದ ನಿಮಿತ್ತ ಊರಿಗೆ ತೆರಳಿದ್ದರು. ಅಲ್ಲಿ ಅವರಿಗೆ ಅಲ್ಪ ಅನಾರೋಗ್ಯ ಕಾಡಿತ್ತು. ಅದಕ್ಕೆ ಚಿಕಿತ್ಸೆ ಪಡೆದಿದ್ದರು. ಆದರೆ ಬುಧವಾರ ಬೆಳಗ್ಗೆ 11.30ರ ವೇಳೆಗೆ ಹೃದಯಾಘಾತದಿಂದ ನಿಧನರಾದರು.
ಅವರು ಬೆಳಗಾವಿಯ ಎಪಿಎಂಸಿ ಠಾಣೆಯ ಪಿಎಸ್ಐ ಕೃಷ್ಣವೇಣಿ ಗುರ್ಲಹೊಸೂರು ಅವರ ಪತಿಯಾಗಿದ್ದರು. ಅವರಿಗೆ ಮುದ್ದಾದ ಮಗುವಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ