ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಾಡ್ಜ್ ಒಂದರಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉಪ್ಪಾರಪೇಟೆಯಲ್ಲಿ ನಡೆದಿದೆ.
ರಂಗನಾಥ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಗೌರಿಬಿದನೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇದೀಗ ಏಕಾಏಕಿ ಉಪ್ಪಾರಪೇಟೆ ಲಾಡ್ಜ್ ಒಂದರ ರೂಮಿನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ರಂಗನಾಥ್ ಕುಮಾರ್ ಮೃತದೇಹ ಪತ್ತೆಯಾಗಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಸಂಕಷ್ಟ; 5 ಕೋಟಿ ಮೌಲ್ಯದ 2 ವಾಚ್ ಸೀಜ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ