*ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ: ಕಾರ್ಮಿಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮಣ್ಣು ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಸಂಭವಿಸಿದೆ. ಯಲಹಂಕದ ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಪಾಯ ಅಗೆಯಲು ಕಾರ್ಮಿಕರು ದೊಡ್ಡದಾದ ಗುಂಡಿಯನ್ನು ತೆಗೆದಿದ್ದರು. ಸೋಮವಾರ ರಾತ್ರಿ ಅನಿರೀಕ್ಷಿತವಾಗಿ ಮಳೆ ಸುರಿದ ಪರಿಣಾಮ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಕೂಡಲೇ ಕಾರ್ಮಿಕರು ಹೊರಬರಲು ಯತ್ನಿಸಿದ್ದರು.  ಎಲ್ಲಾ ಕಾರ್ಮಿಕರು ಬಂದರೂ ಇಬ್ಬರು … Continue reading *ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ: ಕಾರ್ಮಿಕ ದುರ್ಮರಣ*