ಪ್ರಗತಿವಾಹಿನಿ ಸುದ್ದಿ: ಆಂದ್ರ ಪ್ರದೇಶದ ಕಡಪ-ರಾಯಚೋಟಿ ರಾಷ್ಟ್ರೀಯ ಹೆದ್ದಾರಿಯ ಗುವ್ವಳ ಚೆರುವು ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಕಡಪದಿಂದ ಗುವ್ವಳಚೆರುವಿಗೆ ತೆರಳುತ್ತಿದ್ದ ಕಾರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.
ದುರಂತ ನಡೆದ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಮಪುರಂ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟ ಕೊಂಡ ರೆಡ್ಡಿ ಖಚಿತಪಡಿಸಿದ್ದಾರೆ.
ಕಡಪ-ರಾಯಚೋಟಿ ರಾಷ್ಟ್ರೀಯ ಹೆದ್ದಾರಿಯ ಗುವ್ವಳ ಚೆರುವು ಘಾಟ್ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕಡಪದಿಂದ ಗುವ್ವಳ ಚೆರುವಿಗೆ ತೆರಳುತ್ತಿದ್ದ ಕಾರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ರಾಮಾಪುರ ಸಿಐ ವೆಂಕಟಕೊಂಡ ರೆಡ್ಡಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ