
ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿಯೇ ನಡೆದಿದೆ. ಮೈಸೂರಿನ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥಗೊಂಡಿದ್ದಾರೆ.
94 ಜನರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀದಲಾಗುತ್ತಿದೆ. ಮೂವರಲ್ಲಿ ಕಾಲರ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವರು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ