Kannada NewsKarnataka NewsLatest
*ಕಲುಷಿತ ನೀರು ಸೇವನೆ; ವಸತಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.
ಕಸ್ತೂರಬಾ ವಸತಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ಬಳಲುತ್ತಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳನ್ನು ಕೆಂಭಾವಿ ಸಮುದಾಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಟಿಹೆಚ್ ಒ ಡಾ.ಆರ್.ವಿ.ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.