Politics

*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲ್ಯಾಕ್ ಲಿಸ್ಟ್ ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. ಮೂವತ್ತು ವರ್ಷಕ್ಕೆ ಲೀಸ್ ಗೆ ಕೊಟ್ಟಿದ್ದಾರೆ. ಅದರಲ್ಲಿಯೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.

ಜೆಡಿಎಸ್ ನ್ನು ನಿರ್ನಾಮ ಮಾಡಿದ್ದೇವೆ ಎಂಬ ನಿಮ್ಮ ಮಾತುಗಳು ನಾನು ಲೋಕಸಭೆಗೆ ನಿಲ್ಲುವಂತೆ ಮಾಡಿತು. ಜೆಡಿಎಸ್ ಪಕ್ಷವನ್ನು ಬಿಜೆಪಿ ಮುಂದೆ ಮಂಡಿಯೂರಿಸಿದ್ದಾರೆ. ಬನ್ನಿ ನಮ್ಮ ಪಕ್ಷಕ್ಕೆ ಎಂದು ಕನಕಪುರದ ಸ್ನೇಹಿತರು ಹೇಳಿದ್ದರು. ಜೆಡಿಎಸ್ ಪಕ್ಷಕ್ಕ ಕಟ್ಟಿದ್ದು ದೇವೇಗೌಡರು. ಅವರ 90ನೇ ವಯಸ್ಸಿನಲ್ಲಿ ಹಲವು ಘಟನೆಗಳು ನಡೆದಿವೆ. ನೋವಿನ ನಡುವೆಯೂ ರಾಜ್ಯದ ಅಭಿವೃದ್ಧಿ ಅವರ ಹೃದಯದಲ್ಲಿದೆ ಎಂದು ಹೇಳಿದರು.

Home add -Advt


Related Articles

Back to top button