
ಪ್ರಗತಿವಾಹಿನಿ ಸುದ್ದಿ; ಬೀದರ್: ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದರ್ ನಲ್ಲಿ ಕಲುಷಿತ ನೀರಿನಿಂದ 21 ಜನರು ತೀವ್ರ ಅಸ್ವಸ್ಥರಾಗಿದ್ದಾರೆ. ಈ ಪ್ರಕರಣ ಸಂಬಂಧ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಜನರು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಪ್ರಕರಣ ಸಂಬಂಧ ತಾಲೂಕು ಪಂಚಾಯತ್ ಇಒ ಮಾಣಿಕ್ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರಕರಣ ಸಂಬಂಧ ಘಟನಾದ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ವರದಿ ನೀಡುವಂತೆ ಕೇಳಿದ್ದರು. ಆದರೆ ಇಒ ಮಾಣಿಕ ರಾವ್ ವರದಿ ನೀಡಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ