Karnataka NewsLatest

*ಕಲುಷಿತ ನೀರು ಸೇವಿಸಿ ಮಹಿಳೆ ಸಾವು: ಪಿಡಿಒ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಹೊನ್ನಳಿ ತಾಲೂಕಿನ ಹುಣಸಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪಿಡಿಒ ಪರಮೇಶ್ ಕಳ್ಳೂರು ಅಮಾನತುಗೊಂಡವರು. ಕಲುಷಿತ ನೀರು ಸೇವಿಸಿ ಗ್ರಾಮದ 7 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಕಹ್ಲಾಗಿದ್ದರು. ಅವರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ಪಿಡಿಒ ಪರಮೇಶ್ ಅವರನ್ನು ಅಮಾನತು ಮಡಲಾಗಿದೆ.

ಕುಡಿಯುವ ನೀರಿನ ಪೈಪ್ ಲೈನ್ ನಲ್ಲಿ ಚರಂಡಿ ನೀರು ಸೇರಿಕೊಳ್ಳುತ್ತಿತ್ತು. ಆದಾಗ್ಯೂ ಪಿಡಿಒ ಪರಮೇಶ್ ನಿರ್ಲಕ್ಷ್ಯವಹಿಸಿದ್ದರು. ಇದರಿಂದ ದುರಂತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಆದೇಶ ಹೊರಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button