*”ಹಳ್ಳಿ ಹೈದ ಪ್ಯಾಟೆಗೆ ಬಂದ” ಶೋ ಸ್ಪರ್ಧಿ ರಸ್ತೆ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಿಯಾಲಿಟಿ ಶೋ ನಟ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ನಟ ಬಾವತೀಸ್ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿಯ ಕೋಳಿಕೆರೆ ಸಮೀಪ ನಿಂತಿದ್ದ ಬಸ್ಸಿಗೆ ಅತೀ ವೇಗದಲ್ಲಿ ಬಂದ ಟಿವಿಎಸ್ ಮೊಪೆಡೆ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಬಾವತೀಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.Home add -Advt … Continue reading *”ಹಳ್ಳಿ ಹೈದ ಪ್ಯಾಟೆಗೆ ಬಂದ” ಶೋ ಸ್ಪರ್ಧಿ ರಸ್ತೆ ಅಪಘಾತದಲ್ಲಿ ಸಾವು*