ರಸ್ತೆ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸರಣಿ ಮುಂದುವರಿದಿದೆ. ಪ್ರತಿ ನಿತ್ಯ ಕೋಟ್ಯಂತರ ರೂ.ಗಳ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಕ್ಷೇತ್ರದ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಯಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರಕ್ಕೆ ನೂರಾರು ಯೋಜನೆಗಳನ್ನು ಮಂಜೂರುಮಾಡಿಸಿಕೊಂಡು ಬರುತ್ತಿದ್ದು, ಅವರು ಪ್ರವಾಸದಲ್ಲಿದ್ದಾಗಲೂ ಕೆಲಸಗಳು ವಿಳಂಬವಾಗಬಾರದೆನ್ನುವ ಕಾರಣದಿಂದ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಕಾಮಗಾರಿಗಳಿಗೆ ಚಾಲನೆ ಕೊಡಿಸುತ್ತಿದ್ದಾರೆ. ಪುತ್ರ ಮೃಣಾಲ ಹೆಬ್ಬಾಳಕರ್ ಇಲ್ಲವೇ ಸಹೋದರ ಚನ್ನರಾಜ ಹಟ್ಟಿಹೊಳಿ ಉಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ಸಂಸ್ಥಗಳ ಜನಪ್ರತಿನಿಧಿಗಳು ಯೋಜನೆಗಳ ಭೂಮಿ ಪೂಜೆ ನೆರವೇರಿಸುತ್ತಿದ್ದಾರೆ.
15 ಲಕ್ಷ ರೂ. ವೆಚ್ಚದಲ್ಲಿ ಬಾದರವಾಡಿ ರಸ್ತೆ
ಕ್ಷೇತ್ರದ ಬಾದರವಾಡಿ ಗ್ರಾಮದಲ್ಲಿ 15 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮೃಣಾಲ ಹೆಬ್ಬಾಳಕರ ಸೇರಿ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
20 ಲಕ್ಷ ರೂ. ವೆಚ್ಚದಲ್ಲಿ ಹಂಗರಗಾ ರಸ್ತೆ
ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ 20 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ಮೃಣಾಲ ಹೆಬ್ಬಾಳಕರ ಸೇರಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ
ಕ್ಷೇತ್ರದ ವಾಘವಾಡೆ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ 45 ಲಕ್ಷ ರೂ,ಗಳ ವೆಚ್ಚದಲ್ಲಿ 6 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮೃಣಾಲ ಹೆಬ್ಬಾಳಕರ್ ಸೇರಿ ಭೂಮಿ ಪೂಜೆಯೊಂದಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ