Belagavi NewsBelgaum NewsKannada NewsKarnataka NewsNational

*ಮುಂದುವರಿದ ಮಳೆ ಅಬ್ಬರ: 7 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಮತ್ತು ಬಿರುಗಾಳಿಯ ಆರ್ಭಟ  ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಒಟ್ಟು 7 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಜೋರಾಗಿರಲಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆಗೂ ಭಾರಿ ಮಳೆಯ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. 

ನಾಳೆ ಕರಾವಳಿ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗಲಿದೆಯಾದರೂ, ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಜಾರಿಗೊಳಿಸಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರವೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಹತ್ತು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗವನ್ನು ಬೆಚ್ಚಿಬೀಳಿಸಿದ್ದ ವರುಣನ ಆರ್ಭಟಕ್ಕೆ ಜುಲೈ 11ರಿಂದ ಬ್ರೇಕ್ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button