Kannada NewsKarnataka NewsLatest
*ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಅಮಾನತು*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಪ್ರವೀಣ್ ಸಸ್ಪೆಂಡ್ ಆದವರು. ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡು ಸುಳ್ಳುಮಾಹಿತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಪಾಂಡವಪುರ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರುಪಯೋಗ ಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಆಸ್ಪತ್ರೆ ಮುಖ್ಯವೈದಾಧಿಕಾರಿಯನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.




