ಪ್ರಗತಿವಾಹಿನಿ ಸುದ್ದಿ: ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಫೆಂಗಲ್ ಚಂಡಮಾರುತದ ಬಳಿಕ ರಾಜ್ಯದ ಜನರು ಕೊಂಚ ನಿತ್ಟುಸಿರು ಬಿಟ್ಟಿದ್ದರು. ಆದರೆ ಈಗ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆ ಸರಿಯಾದ ಸಮಯಕ್ಕೆ ಭತ್ತ ಅಡಿಕೆ, ಸೇರಿದಂತೆ ಇನ್ನಿತರ ಬೆಳೆಗಳನ್ನು ಕಟಾವು ಮಾಡಲು ಆಗದೆ ಕಂಗಾಲಾಗಿದ್ದಾರೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ಪದೇ ಪದೇ ವಾಯುಭಾರ ಕು ಉಂಟಾಗುತ್ತಿರುವುದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇದೀಗ ಹವಾಮಾನ ಇಲಾಖೆ ಕರ್ನಾಟಕದ ಕೆಲ ಭಾಗದಲ್ಲಿ 24 ಗಂಟೆಗಳ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದ್ದು, ಹಾಗಾದರೆ ಯಾವೆಲ್ಲ ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ನೋಡೋಣ..
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹೊಸ ಚಂಡಮಾರುತದ ಆರ್ಭಟ ಶುರುವಾಗಿದ್ದು, ಈಗಾಗಲೇ ತಮಿಳುನಾಡು, ಕೇರಳ, ಶ್ರೀಲಂಕಾ ಸೇರಿದಂತೆ ಕೆಲ ಭಾಗದಲ್ಲಿ ತಾಂಡವ ಆಡುತ್ತಿದೆ. ಅದರಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.
ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ, ಮಂಡ್ಯ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಜಾನೆಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದ್ದು, ಮೈಕೊರೆವ ಚಳಿ ಜೊತೆಗೆ ದಟ್ಟವಾದ ಮೋಡಕವಿದ ವಾತಾವರಣ ಆರೋಗ್ಯ ಸಮಸ್ಯೆಗಳಿಗೆ ಕಾರಣವಗುವ ಆತಂಕ ಹೆಚ್ಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ