Kannada NewsKarnataka NewsLatest

*ಗುತ್ತಿಗೆದಾರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಶಿವಾನಂದ್ ಕುನ್ನೂರ್ (40) ಹತ್ಯೆಯಾದ ಪ್ರಥಮದರ್ಜೆ ಗುತ್ತಿಗೆದಾರ. ಬೈಕ್ ನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಶಿವಾನಂದ್ ಮೇಲೆ ದಾಳಿ ನಡೆಸಿದ್ದಾರೆ.

ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಹುಬ್ಬಳ್ಳಿಯತ್ತ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button