ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿದ್ದ ಐವರನ್ನು ಬಂಧಿಸಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದರೆ. ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ 8 ಜನರ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು 8 ಜನರಿಗೆ ವಿಚರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಇಂದು ಬೀದರ್ ರೈಲ್ವೆ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ವೇಳೆ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜು ಕಪನೂರ್, ನಂದಕುಮಾರ್, ಘೋರಕನಾಥ್, ನಂದಕುಮಾರ್ ಹಾಗೂ ಸತೀಶ್ ಬಂಧಿತರು.
ಡಿ.26ರಂದು ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ