*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಹಾಸನ: ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದ ಬಳಿ ನಡೆದಿದೆ. ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಹೊಳೆನರಸಿಪುರದಲ್ಲಿ ಪ್ರಥಮದರ್ಜೆ ಗುತ್ತಿಗೆದಾರರಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಹೇಮಾವತಿ ನದಿಗೆ ಹಾರಿ ಸಾವನ್ನಪ್ಪಿದ್ದಾರೆ.Home add -Advt ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್ ಬಂದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. *ಕಲುಷಿತ ನೀರಿಗೆ 6 ಜನ ಬಲಿ; ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ ನೀಡಿದ ಸಿಎಂ*