ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಠಾಣೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ತೋಟಗಾರಿಕೆ ಸಚಿವ ಮುನಿರತ್ನ ಅವರು ಕೆಂಪಣ್ಣ ಅವರ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಂಪಣ್ಣ ಸೇರಿದಂತೆ ನಾಲ್ವರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.
ಶನಿವಾರ ಸಂಜೆ ಕೆಂಪಣ್ಣ, ವಿ.ಕೃಷ್ಣಾರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಸೇರಿ ನಾಲ್ವರನ್ನು
ಬಂಧಿಸಲಾಗಿದೆ.
ಕೆಂಪಣ್ಣ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ದೊಡ್ಡ ಸುದ್ದಿಯಾಗಿದ್ದರು. ಸಚಿವ ಮುನಿರತ್ನ ಕೆಂಪಣ್ಣ ಸೇರಿದಂತೆ ಇತರರ ವಿರುದ್ಧ ಮಾನನಷ್ಟ ಮೊಕದ್ದೆ ದಾಖಲಿಸಿದ್ದರು. ಪ್ರಕರಣ ಸಂಬಂಧ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದ ಗೈರಾಗಿದ್ದ ಹಿನ್ನೆಲೆಯಲ್ಲಿ ಕೆಂಪಣ್ಣ ಸೇರಿದಂತೆ 19 ಪ್ರತಿವಾದಿಗಳ ವಿರುದ್ಧ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಇದೀಗ ಕೆಂಪಣ್ಣ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
*2 ದೊಡ್ಡ ಕಾರ್ಯಕ್ರಮಗಳಿಗೆ ಕೊರೊನಾ ಕರಿನೆರಳು*
https://pragati.taskdun.com/akhilabharata-kannada-sahitya-sammelanaratrshiya-yuvajanotsavacovidbf-7-virus-fears/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ