ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.
ಈ ಕುರಿತು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ. ಆ ಪಂಚಾಯಿತಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುವವರ ಸ್ಪರ್ಧೆ ಮಾಡುವಂತಿಲ್ಲ ಎಂದು ತಿಳಿಸಿದೆ.
ಸರ್ಕಾರಿ ನೌಕರಿಯಲ್ಲಿರುವವರ ಪತಿ ಅಥವಾ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು ಎಂದೂ ತಿಳಿಸಿದೆ.
ಅಭ್ಯರ್ಥಿ ಅದೇ ಪಂಚಾಯಿತಿಗೆ ಸೇರಿದವನಾಗಿರಬೇಕು. ಮೀಸಲು ಸ್ಥಾನಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಸಾಮಾನ್ಯ ವರ್ಗಕ್ಕೆ 200ರೂ. ಮೀಸಲಾತಿ ವರ್ಗಕ್ಕೆ 100ರೂ.ಗಳ ಠೇವಣಿ ನಿಗದಿಪಡಿಸಿದೆ.
ಅಭ್ಯರ್ಥಿ 21 ವರ್ಷದವನಾಗಿರಬೇಕು ಹಾಗೂ ಒಂದು ಕ್ಷೇತ್ರಕ್ಕೆ 4 ನಾಮಪತ್ರ ಸಲ್ಲಿಸಬಹುದು.
ನಾಮಪತ್ರ ವಾಪಸ್ ಪಡೆಯಲು ಸೂಚಕರ ಅಥವಾ ಏಜೆಂಟರ ಮೂಲಕ ಬಂದರೆ ಮಾತ್ರ ಹಿಂತೆಗೆದುಕೊಳ್ಳಲು ಅವಕಾಶವಿದೆ. ಈ ಕುರಿತು ಚುನಾವಣಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ