Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಹೊಡೆದಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ;  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಸಂಭ್ರಮದ ಮಧ್ಯೆ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮದಲ್ಲಿ ಅಂಬೇಡ್ಕ‌ರ್ ಅವರ ಜಯಂತಿ ಅಂಗವಾಗಿ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. 

ನೋಡನೋಡುತ್ತಿದ್ದಂತೆಯೇ ಈ ವಾಗ್ವಾದ ವಿಕೋಪಕ್ಕೆ ತಿರುಗಿ, ಪರಸ್ಪರ ಗುಂಪುಗಳ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದಿದೆ.

ಪ್ರವೀಣ್ ಹಣಮಂತ ಭಜಂತ್ರಿ ಎಂಬುವವರು ಬ್ಯಾನರ್ ಕಟ್ಟುತ್ತಿದ್ದಾಗ ರೋಹನ್ ಚಿದಾನಂದ ಕಾಂಬಳೆ, ಚಿದಾನಂದ ರಾಮಪ್ಪ ಕಾಂಬಳ, ವಿವೇಕ ಚಿದಾನಂದ ಕಾಂಬಳೆ ಮುಂತಾದವರು ಆಕ್ಷೇಪ ವ್ಯಕ್ತಪಡಿಸಿದ್ದರು.

Home add -Advt

ಇದು ನಮ್ಮ ಏರಿಯಾ ನೀನು ಯಾಕೆ ಇಲ್ಲಿ ಬ್ಯಾನ‌ರ್ ಕಟ್ಟುತ್ತೀಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮಾತಿಗೆ ಮಾತು ಬೆಳೆದು ಸನ್ನಿವೇಶ ವಿಕೋಪಕ್ಕೆ ತಿರುಗಿತ್ತು.

ಈ ಸಂಘರ್ಷದ ವೇಳೆ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳದಲ್ಲಿ ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

Related Articles

Back to top button