Kannada NewsKarnataka News
ರಾಯಬಾಗದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ ಹಲವರ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿ, ರಾಯಬಾಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಭಾನುವಾರ ರಾಯಬಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿರೋಧ ಪಕ್ಷದ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಣಿಕ್ ಸಿಂಗ್ ಠಾಕೂರ, ಐವಾನ್ ಡಿಸೋಜ ಮೊದಲಾದವರು ಆಗಮಿಸಿ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಾಜು ಶಿರಗಾಂವೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಬಡವರ ಪರ ಕೆಲಸ ಮಾಡುವ ಪಕ್ಷವಾಗಿದೆ. ಹಿಂದೆ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷದ ಮಂತ್ರಿಗಳು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಬಡ ಜನರ ಕಲ್ಯಾಣಕ್ಕಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ . ಈ ಸಮಾವೇಶದಲ್ಲಿ ಹಾಲಿ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದ ಸ್ಥಳ ವೀಕ್ಷಣೆ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದ ವೇದಿಕೆ ಸ್ಥಳ, ಸಮಾವೇಶದ ಪೂರ್ವಭಾವಿ ತಯಾರಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವೀಕ್ಷಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹೇಂದ್ರ ತಮ್ಮಣ್ಣವರ್, ಡಿ ಎಸ್ ನಾಯಕ್, ಮಾಜಿ ಶಾಸಕ ಶ್ಯಾಮ ಘಾಟಿಗೆ, ಅಪ್ಪಾಸಾಹೇಬ ಕುಲಗುಡೆ, ಬ್ಲಾಕ್ ಅಧ್ಯಕ್ಷ ಈರಗೌಡ ಪಾಟೀಲ್ ಸದಾಶಿವ ದೇಸಿಂಗೆ, ಮಹಾವೀರ ಮೋಹಿತೆ, ಸುಕುಮಾರ ಪಾಟೀಲ್, ಅರ್ಜುನ ಬಂಡಗಾರ್, ಬಿ ಎನ್ ಬಂಡಗಾರ್, ದಿಲೀಪ ಜಮಾಧಾರ್, ಹಾಜಿ ಮುಲ್ಲಾ, ಜಗದೀಶ್ ಯಲ್ಲೂರ, ಗಂಗಾಧರ್ ಕಾಂಬ್ಳೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ – ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ