
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಐದು ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಂದಗಡ ಗ್ರಾಮದ ಜನತಾ ಕಾಲನಿಯ ರಘುನಾಥ್ ಮಾದರ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು ಘಟನೆಯಲ್ಲಿ ರಘುನಾಥ ಮಾದರ(35), ನಾಗರಾಜ್ ಕೋಲಕಾರ(30),ಮಷನವ್ವ ಕಾಂಬಳೆ(55), ಮನುಷಾ ಕಾಂಬಳೆ(26), ಪ್ರಕೃತಿ ಕಾಂಬಳೆ,ಆರಾಧ್ಯ ಕಾಂಬಳೆ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ನಂದಗಡದಲ್ಲಿ ಕಳೆದ ಒಂದು ವಾರದಲ್ಲಿ ಗ್ರಾಮದೇವಿ ಜಾತ್ರೆ ನಡೆಯುತ್ತಿದ್ದು ಎಲ್ಲರ ಮನೆಗೆ ನೆಂಟರು ಬಂದಿರುವ ಸಂದರ್ಭದಲ್ಲಿ ಘಟನೆ ನಡೆದಿದ್ದು ಘಟನೆ ನಡೆದ ತಕ್ಷಣ ಅಕ್ಕಪಕ್ಕದ ಮನೆಯವರು ನೀರು ಹಾಕಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ