Latest

ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ “ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆಯನ್ನು  ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಭಾನುವಾರ  ಬಿಡುಗಡೆಗೊಳಿಸಿದರು.
ಮುಂದಿನ ವರ್ಷಕ್ಕೆ 20 ಸಾವಿರ ಕೋಟಿ ರೂ. ಕೃಷಿ ಸಾಲ ಗುರಿ
ಮುಂದಿನ ವರ್ಷದ ಗುರಿ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಈ ಸಂದರ್ಭದಲ್ಲಿ  ಮುಖ್ಯಮಂತ್ರಿಗಳು ಸೂಚಿಸಿದರು.
ರೈತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ
ಪ್ರಸಕ್ತ ಸಾಲಿನಲ್ಲಿ ರೈತರಿಗೆ 14500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್,  ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button