ಅಡ್ವಾನ್ಸ್ಡ್ ಟೆಕ್ನಾಲಜಿ ಬಳಸಿ ನಕಲು ಮಾಡಿದ ಪರೀಕ್ಷಾರ್ಥಿ: ಬೆಳಗಾವಿಯಲ್ಲಿ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅತ್ಯಾಧುನಿಕ ತಾಂತ್ರಿಕತೆ ಬಳಸಿ ನಕಲು ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಭಾನುವಾರ ಬಂಧಿಸಲಾಗಿದೆ.
ಬೆಳಗಾವಿ ನಗರದ ಸರದಾರ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಾಗರೀಕ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ವೇಳೆ ಈ ಘಟನೆ ನಡೆದಿದೆ.
ಗೋಕಾಕ ತಾಲೂಕಿನ ವ್ಯಕ್ತಿ ಬ್ಲುಟೂತ್ ಬಳಸಿ ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಗೋಕಾಕ ತಾಲೂಕಿನ ಮಸಗುಪ್ಪಿ ಗ್ರಾಮದ ಲಕ್ಷ್ಮಣ ಅಸಿರೋಟಿ ಬಂಧಿತ. ಆತನ ವಿರುದ್ಧ ಖಡೇಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲುಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದಾಗ ಆತ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆ ಮುಗಿಯಲು ಕೆಲವೇ ನಿಮಿಷ ಬಾಕಿ ಇದ್ದಾಗ ಆರೋಪಿ ನಕಲು ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಪ್ರಗತಿವಾಹಿನಿಗೆ ಮಾಹಿತಿ ಸಿಕ್ಕಿದೆ.
ಈ ಹಿಂದೆ ಕೂಡ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ವೇಳೆ ಗೋಕಾಕ ತಾಲೂಕಿನ ಅನೇಕರು ವಿವಿಧ ರೀತಿಯಲ್ಲಿ ಅಡ್ಡದಾರಿ ಹಿಡಿದು ಸಿಕ್ಕಿಬಿದ್ದಿದ್ದರು. ಆ ಪ್ರಕರಣಗಳು ತನಿಖೆಯ ಹಂತದಲ್ಲಿರುವಾಗಲೇ ಮತ್ತೊಂದು ಘಟನೆ ನಡೆದಿದೆ. ಇದೊಂದು ದೊಡ್ಡ ಜಾಲ ಎಂದು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಲಾಡ್ಜ್ ಗಳಲ್ಲಿ ರಾತ್ರೋರಾತ್ರಿ ಅನಿರೀಕ್ಷಿತ ತಪಾಸಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ