
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಭಾರತದಾಲ್ಲಿ 74 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ಜನರಲ್ಲಿ ಧೈರ್ಯ ತುಂಬಿದ್ದು, ಸೋಂಕಿನ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಕೋವಿಡ್-19 ನೊವೆಲ್ ಕೊರೋನಾ ವೈರಸ್ ಪರಿಸ್ಥಿತಿ ಬಗ್ಗೆ ಸರ್ಕಾರ ಜಾಗುರುಕತೆ ವಹಿಸಿದ್ದು, ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರ ರಕ್ಷಣೆಗಾಗಿ ಕೇಂದ್ರ, ರಾಜ್ಯ ಸಚಿವರು, ಅನೇಕ ಹಂತದ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ಹೊರ ದೇಶಗಳಿಗೆ ಪ್ರಯಾಣಿಸುವ ವೀಸಾವನ್ನು ಕೂಡ ರದ್ದು ಮಾಡಲಾಗಿದೆ ಎಂದರು.
ಸೋಂಕು ಹರಡದಂತೆ ಸರ್ಕಾರದಿಂದ ಜನರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಜನರು ಕೂಡ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ವಿದೇಶ ಪ್ರಯಾಣಗಳನ್ನು ರದ್ದು ಮಾಡುವುದು ಒಳಿತು ಎಂದು ಸಲಹೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ