ರಾಜ್ಯದ ಮೊದಲ ಕೊರೊನಾ ಸೋಂಕಿತ ಕುಟುಂಬ ಗುಣಮುಖ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ಸೋಂಕಿತ ಮೂವರು ವ್ಯಕ್ತಿಗಳು ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಬೆಂಗಳೂರಿನ ಡೆಲ್ ಕಂಪನಿಯ ಟೆಕ್ಕಿ, ಆತನ ಪತ್ನಿ, ಮಗಳಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿತ್ತು. ಅಮೆರಿಕದಿಂದ ಮಾರ್ಚ್ 1ರಂದು ಬೆಂಗಳೂರಿಗೆ ಬಂದಿದ್ದ ಡೆಲ್ ಕಂಪನಿಯ ಟೆಕ್ಕಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ತಕ್ಷಣ ಇಡೀ ಕುಟುಂಬವನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟೆಕ್ಕಿಯ ಪತ್ನಿ, ತನಗೆ ಮತ್ತು ಮಗಳಿಗೂ ಕೊರೊನಾ ಬಂದ ವಿಚಾರವನ್ನು ಶಾಲೆಗೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಶಾಲೆಯನ್ನು ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿತ್ತು.

ಇದೀಗ ಟೆಕ್ಕಿ ದಂಪತಿ ಹಾಗೂ ಪುತ್ರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮೂವರನ್ನೂ ನಾಳೆ ಡಿಸ್ಚಾರ್ಜ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button