ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಕಾರ್ಖಾನೆ, ಕಂಪನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು, ನೈಟ್ ಶಿಫ್ಟ್ ಉದ್ಯೋಗಕ್ಕೆ ತೆರಳುವವರಿಗೆ ಅವಕಾಶವಿದ್ದು, ಹೋಂ ಡಿಲೆವರಿ, ಇ ಕಾಮರ್ಸ್ ವಾಹನಗಳಿಗೆ ಅನುಮತಿ ನೀಡಲಾಗುತ್ತಿದೆ.
ಹುಷಾರ್, ಬೆಳಗಾವಿಯಲ್ಲಿ ಮಾರ್ಷಲ್ ಗಳ ನೇಮಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ