ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಮಾರ್ಚ್ 22 ರಿಂದ ಒಂದು ವಾರ ಯಾವುದೇ ಅಂತಾರಾಷ್ಟ್ರೀಯ ಕಂಪನಿಯ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಲು ಅನುಮತಿ ಇರುವುದಿಲ್ಲ. ಮಾರ್ಚ್ 31ರ ಬಳಿಕ ಹೊಸ ಮಾರ್ಗಸೂಚಿ ಅನ್ವಯ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಅಲ್ಲದೇ 65 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಮತ್ತು 10 ವರ್ಷದ ಒಳಗಿನ ಮಕ್ಕಳು ಮನೆಯಿಂದ ಹೊರಗೆ ಬಾರದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಸಾರ್ವಜನಿಕ ಪ್ರತಿನಿಧಿಗಳು, ಸರ್ಕಾರಿ ಸಿಬ್ಬಂದಿ, ಮೆಡಿಕಲ್ ಸಿಬ್ಬಂದಿ, ಅಗತ್ಯ ವಸ್ತುಗಳನ್ನು ಪೂರೈಸುವ ಮಂದಿ ಹೊರತು ಪಡಿಸಿ ಉಳಿದವರು ಮನೆಯಲ್ಲಿರಬೇಕು. ಕೇಂದ್ರ ಸರ್ಕಾರದ ನೌಕರರು ರೊಟೆಷನ್ ಆಧಾರದಲ್ಲಿ ಪಾಳಿಗೆ ಬರಬೇಕು. ರಾಜ್ಯ ಸರ್ಕಾರಗಳು ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ