ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮಹಾಮಾರಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಬೆಳಿಗ್ಗೆ ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಓರ್ವ ಸಾವನ್ನಪ್ಪಿದ್ದರೆ, ಸಂಜೆ ವೇಳೆಗೆ ಬೀದರ್ ನಲ್ಲಿ ಮಹಿಳೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 37 ಕೊರೊನಾ ಪಾಸಿಟೀವ್ ಕೇಸ್ ಪತ್ತೆಯಾಗಿದೆ. ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚುತ್ತಿದ್ದು, ಬೆಣ್ಣೆ ನಗರಿ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಬೀದರ್ ನಲ್ಲಿ 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು 48 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ 1, ಬೆಂಗಳೂರು 1, ಮಂಡ್ಯ 2, ಕಲಬುರಗಿ 2, ವಿಜಯಪುರ 1, ಹಾವೇರಿಯಲ್ಲಿ 1 ಪ್ರಕರಣ ಪಾತ್ತೆಯಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ಪೊಲೀಸ್ ಪೇದೆಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಬೇಗೂರು ಪೊಲೀಸ್ ಠಾಣೆ ಪೇದೆಯಾಗಿದ್ದು, ಹೊಂಗಸಂದ್ರದಲ್ಲಿ ಕರ್ತವ್ಯ ನಿರತರಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ