ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಬಿಸಿಲಿನಲ್ಲಿ ಕುಳಿತುಕೊಳ್ಳುವ ಮೂಲಕ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ನಿಮಿಷ ಬಿಸಿಲಿನಲ್ಲಿ ಕುಳಿತುಕೊಳ್ಳಿ, ಇದರಿಂದಾಗಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕೊರೊನಾ ವೈರಸ್ ಸಾಯುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಸಹ ಕ್ಯಾನ್ಸರ್ ಚಿಕಿತ್ಸೆಗೆ ಗೋಮೂತ್ರವನ್ನು ಬಳಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.
ಬೆಳಗ್ಗೆ ಸುಮಾರು 11ರಿಂದ ಮಧ್ಯಾಹ್ನ 12ರ ಮಧ್ಯೆ ಬಿಸಿಲು ಜೋರಾಗಿರುತ್ತದೆ. ಈ ವೇಳೆ ಬಿಸಿಲಿನಲ್ಲಿ 15 ನಿಮಿಷಗಳ ಕಾಲ ಕುಳಿತುಕೊಂಡರೆ ವಿಟಮಿನ್ ಡಿ ಲೆವೆಲ್ ಹೆಚ್ಚುತ್ತದೆ. ಇದರಿಂದಾಗಿ ರೋಗ ನಿರೋಧಕ ಶಕ್ತಿ ಸಹ ಹೆಚ್ಚುತ್ತದೆ. ಈ ಮೂಲಕ ಕೊರೊನಾ ವೈರಸ್ ಸಾಯುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೊರೊನಾ ವೈರಸ್ ವಿಚಾರವಾಗಿ ಬಿಜೆಪಿ ನಾಯಕರು ಎಚ್ಚರಿಕೆಯಿಂದ ಮಾತನಾಡಬೇಕು. ಈ ಸಾಂಕ್ರಾಮಿಕ ರೋಗದ ವಿಚಾರವಾಗಿ ಅನಗತ್ಯವಾಗಿ ಟ್ವೀಟ್ ಮಾಡುವುದಾಗಲಿ, ಹೇಳಿಕೆ ನೀಡುವುದಾಗಲಿ ಮಾಡಬಾರದು ಎಂದು ಪ್ರಧಾನಿ ಮೋದಿ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ